ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಬಿಜೆಪಿ ನಾಯಕರು ಬೀದಿಗೆ ಬಂದಿದ್ದಾರೆ ಎಂಬ ಕಾಂಗ್ರೆಸ್ ಟೀಕೆ ವಿಚಾರವಾಗಿ ಲೋಕಸಭೆಯಲ್ಲಿ ಯಾರು ಬೀದಿಗೆ ಬರುತ್ತಾರೆ ತೋರಿಸುತ್ತೇವೆ. ಸೂರ್ಯ ಚಂದ್ರ ಇರುವುದು ಎಷ್ಟು ಸತ್ಯವೋ ಮೋದಿ ಪ್ರಧಾನಿ ಆಗುವುದೂ ಅಷ್ಟೇ ಸತ್ಯ ಎಂದು ಮಾಜಿ ಸಚಿವ
ಕೆ.ಎಸ್. ಈಶ್ವರಪ್ಪ ತಿರುಗೇಟು ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ದೇಶ ಜಗತ್ತಿನಲ್ಲಿ ಬಹಳ ಮುಂದಕ್ಕೆ ಹೋಗಿದೆ. ವಿಜ್ಞಾನದಲ್ಲೂ ಭಾರತ ಮುಂದುವರೆದಿದೆ. ಇವತ್ತು ಮೋದಿ ಮಾಡಿದ ಭಾಷಣ ಎಲ್ಲರೂ ಮೆಚ್ಚಿದ್ದಾರೆ. ಕಾಂಗ್ರೆಸ್‌ನಿಂದ ಬಿಜೆಪಿಗೆ ಬಂದ 17 ಶಾಸಕರನ್ನು ಸೂರ್ಯ ಚಂದ್ರ ಇರುವವರೆಗೆ ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದರು. ಈಗ ಪಕ್ಷಕ್ಕೆ ಸೇರಿಸಿಕೊಳ್ಳಲು ಗುಂಪು ನಡೆಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.