ಹೊಸದಿಗಂತ ಡಿಜಿಟಲ್ ಡೆಸ್ಕ್:
ಒಂದು ಗ್ರಾಂ ಡ್ರಗ್ಸ್ ಕೂಡ ದೇಶಕ್ಕೆ ಬರಲು ಬಿಡುವುದಿಲ್ಲ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ವಿಜ್ಞಾನ ಭವನದಲ್ಲಿ ಗುರುವಾರ ನಡೆದ ಮಾದಕ ದ್ರವ್ಯಗಳ ರಾಷ್ಟ್ರೀಯ ಸಮನ್ವಯ ಕೇಂದ್ರದ ಏಳನೇ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಭಾರತವನ್ನು ಮಾದಕ ದ್ರವ್ಯ ಮುಕ್ತಗೊಳಿಸುವುದಾಗಿ ಭರವಸೆ ನೀಡಿದರು.
ಮಾದಕ ವಸ್ತುಗಳ ಪೂರೈಕೆ ಸರಪಳಿಯನ್ನು ನಾಶಪಡಿಸಲು ನಿರ್ದಯ ಕ್ರಮಗಳನ್ನು ಕೈಗೊಳ್ಳುವಂತೆ ಮಾದಕ ದ್ರವ್ಯ ವಿರೋಧಿ ಅಧಿಕಾರಿಗಳಿಗೆ ಅಮಿತ್ ಶಾ ಸಲಹೆ ನೀಡಿದ್ದಾರೆ.