Friday, November 14, 2025

ನಿರಾಯಾಸವಾಗಿ ಗೆದ್ದು ಸರ್ಕಾರ ರಚನೆ ಮಾಡ್ತೀವಿ: ತೇಜಸ್ವಿ ಯಾದವ್‌ ವಿಶ್ವಾಸ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಈ ಬಾರಿ ಬಿಹಾರದಲ್ಲಿ ನಿರಾಯಾಸವಾಗಿ ಗೆದ್ದು ಸರ್ಕಾರ ರಚನೆ ಮಾಡುತ್ತೇವೆ ಎಂದು ಮಹಾಘಟಬಂಧನ್‌ ಪಕ್ಷದ ಮೈತ್ರಿ ಅಭ್ಯರ್ಥಿ ತೇಜಸ್ವಿ ಯಾದವ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬಿಹಾರ ಚುನಾವಣಾ ಫಲಿತಾಂಶಕ್ಕೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಹಾಘಟಬಂಧನ್‌ ಸ್ಪಷ್ಟ ಬಹುಮತ ಗಳಿಸಲಿದೆ ಎನ್ನುತ್ತಾ ಸಮೀಕ್ಷೆಗಳನ್ನ ತಳ್ಳಿಹಾಕಿದರು. ರಾಜ್ಯದಲ್ಲಿ ನಾವು ಸರ್ಕಾರ ರಚಿಸುತ್ತೇವೆ, ಉದ್ಯೋಗ ರಾಜ್ಯ ಬರುತ್ತೆ ಅಂತ ಹೇಳಿದ್ದಾರೆ. 

ಇದಕ್ಕೂ ಮುನ್ನ, ನಾವು ಸ್ಪಷ್ಟ ಬಹುಮತ ಪಡೆದು ಸರ್ಕಾರ ರಚಿಸುತ್ತೇವೆ ಅನ್ನೋ ಸಂಪೂರ್ಣ ವಿಶ್ವಾಸ ಇದೆ. ನಿರಾಯಾಸವಾಗಿ ಗೆಲ್ಲುತ್ತೇವೆ. ನಮ್ಮ ಕಾರ್ಯಕರ್ತರು ಎಲ್ಲಾ ಮತ ಎಣಿಕೆ ಕೇಂದ್ರಗಳಲ್ಲಿ ಎಚ್ಚರಿಕೆ ವಹಿಸಿದ್ದಾರೆ ಎಂದು ತಿಳಿಸಿದರಲ್ಲದೇ, ಚುನಾವಣಾ ಆಯೋಗ ಮತ ಎಣಿಕೆಯಲ್ಲಿ ನಿಷ್ಪಕ್ಷಪಾತತೆ ಖಚಿತಪಡಿಸಿಕೊಳ್ಳಬೇಕು ಎಂದು ಒತ್ತಾಯಿಸಿದರು.

ಅಲ್ಲದೇ ಸರ್ಕಾರ 2020ರಲ್ಲಿ ಮಾಡಿದ ತಪ್ಪನ್ನ ಮತ್ತೆ ಮಾಡಿದ್ರೆ ಅಥವಾ ಸಂವಿಧಾನ ಬಾಹಿರ ಚಟುವಟಿಕೆ ಮಾಡಿದ್ರೆ, ಅಧಿಕಾರ ಮೀರಿ ವರ್ತಿಸಿದ್ರೆ ಜನರೇ ತಕ್ಕ ಉತ್ತರ ಕೊಡ್ತಾರೆ ಎಂಬ ಎಚ್ಚರಿಕೆಯನ್ನೂ ತೇಜಸ್ವಿ ಯಾದವ್ ನೀಡಿದರು.

error: Content is protected !!