ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾವು ಬಿಜೆಪಿಯವರಂತೆ ನಿಮ್ಮ ಕೈಬಿಡಲ್ಲ. ಸುಳ್ಳು ಹೇಳಲ್ಲ. ನಿಮ್ಮ ಬದುಕಿಗೆ ಸ್ಪಂದಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
2024ರ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಕೆಪಿಸಿಸಿ ಕಚೇರಿಯಲ್ಲಿ ನಡೆದ ಖಾತರಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು. ನಮ್ಮ ಕಾಂಗ್ರೆಸ್ ಸರ್ಕಾರವು ಎಲ್ಲರನ್ನೂ ಸಮಾನವಾಗಿ ಪರಿಗಣಿಸುವ ಕಾರ್ಯಕ್ರಮಗಳನ್ನು ರೂಪಿಸುತ್ತದೆ. ಇವೆಲ್ಲವನ್ನೂ ನೀವುಗಳು ನಾಡಿನ ಜನರಿಗೆ ಸರಿಯಾಗಿ ಅರ್ಥ ಮಾಡಿಸಿ ಬಿಜೆಪಿಯ ಸುಳ್ಳುಗಳಿಗೆ ಸತ್ಯದ ದಾಖಲೆಗಳನ್ನು ಮಂಡಿಸಿ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ನಮ್ಮ ಸರ್ಕಾರದ ಭರವಸೆಗಳನ್ನು, ನಮ್ಮ ಸಾಧನೆಗಳನ್ನು ಬಿಜೆಪಿ ಸಾಧನೆ ಎಂದು ಹಳ್ಳಿ ಹಳ್ಳಿಗಳಲ್ಲಿ ಸುಳ್ಳು ಹೇಳಿಕೊಂಡು ಬರುತ್ತಿದ್ದಾರೆ. ನಮ್ಮ ಕಾಂಗ್ರೆಸ್ ಸರಕಾರ ಜನರಿಗೆ, ಮಹಿಳೆಯರ ಖಾತೆಗೆ ಹಣ ಹಾಕುತ್ತಿದ್ದೆ. ನಮ್ಮ ಸರ್ಕಾರವು ನಮ್ಮ ದೇಶದ ಜನರು, ಮಹಿಳೆಯರು ಮತ್ತು ಯುವಜನರನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಬಲಪಡಿಸುತ್ತಿದೆ ಎಂದು ಹೇಳಿದ್ದಾರೆ.