BIG NEWS- ಹಿಜಾಬ್‌ ಇಸ್ಲಾಂ ನ ಅತ್ಯಗತ್ಯ ಭಾಗವಲ್ಲ: ಹೈಕೋರ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಬೆಂಗಳೂರು: ಹಿಜಾಬ್ ನಿರ್ಬಂಧ ಪ್ರಶ್ನಿಸಿ ಉಡುಪಿ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು ಹಾಗೂ ಕುಂದಾಪುರದ ಜ್ಯೂನಿಯರ್ ಕಾಲೇಜುಗಳ ವಿದ್ಯಾರ್ಥಿನಿಯವರು ಸಲ್ಲಿಸಿದ ಅರ್ಜಿಯನ್ನು ಕರ್ನಾಟಕ ಉಚ್ಚನ್ಯಾಯಾಲಯದ ತ್ರಿಸದಸ್ಯ ಪೀಠವು ತಿರಸ್ಕರಿಸಿದೆ.

ಹೈಕೋರ್ಟ್ ಮುಖ್ಯನ್ಯಾಯಾಧೀಶ ನ್ಯಾ. ರಿತು ರಾಜ್ ಅವಸ್ಥಿ, ನ್ಯಾ. ಕೃಷ್ಣ ಎಸ್. ದೀಕ್ಷಿತ್ ಮತ್ತು ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್ ಅವರಿದ್ದ ತ್ರಿಸದಸ್ಯ ಪೀಠವು ಹಿಜಾಬ್ ಇಸ್ಲಾಂನ ಅತ್ಯಗತ್ಯ ಭಾಗವಲ್ಲ. ಮುಸ್ಲಿಂ ಮಹಿಳೆಯರು ಹಿಜಾಬ್ ಧರಿಸುವುದು ಸಂವಿಧಾನದ ಅಡಿ ಮೂಲಭೂತ ಹಕ್ಕು ಅಲ್ಲವೆಂದು ಅಭಿಪ್ರಾಯಪಟ್ಟಿದೆ.

ಶಿಕ್ಷಣ ಸಂಸ್ಥೆಗಳಲ್ಲಿ ಸಮವಸ್ತ್ರ ಸಂಹಿತೆ ಜಾರಿಗೆ ತರುವಂತೆ ಸರಕಾರ ಹೊರಡಿಸಿದ ಆದೇಶ ನಿಯಮಬಾಹಿರ ಅಲ್ಲ. ಸಂವಿಧಾನದ ವಿಧಿ 25 (ಧಾರ್ಮಿಕ ಸ್ವಾತಂತ್ರ್ಯ ವಿಧಿ 19 (1) ಅಭಿವ್ಯಕ್ತಿ ಸ್ವಾತಂತ್ರ್ಯ ಹಾಗೂ ವಿಧಿ 21 (ಜೀವಿಸುವ ಹಕ್ಕು) ಉಲ್ಲಂಘನೆ ಆಗಿಲ್ಲವೆಂದು ತ್ರಿಸದಸ್ಯ ಪೀಠವು ಹೇಳಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!