March 15, 2026
Sunday, March 15, 2026
spot_img

WEATHER | ಕರ್ನಾಟಕದ 19 ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಧಾರಾಕಾರ ಮಳೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕರ್ನಾಟಕ 19 ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಮೂರು ದಿನಗಳಿಂದ ಕೇವಲ ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಷ್ಟೇ ಅಲ್ಲ ಬೆಂಗಳೂರು ಮತ್ತಿತರೆ ಕಡೆಗಳಲ್ಲೂ ಮಳೆಯಾಗುತ್ತಿದೆ.

ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಕೊಪ್ಪಳ, ಹಾಸನ, ಕೊಡಗಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ವಿಜಯನಗರ, ರಾಮನಗರ, ಮೈಸೂರು, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಚಾಮರಾಜನಗರ, ಯಾದಗಿರಿ, ರಾಯಚೂರು, ಕಲಬುರಗಿ, ಹಾವೇರಿ, ಧಾರವಾಡ,ಬೆಳಗಾವಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಮಧುಗಿರಿ, ನಾಯಕನಹಟ್ಟಿ, ನಾಗಮಂಗಲ, ಬರಗೂರು, ಥೊಂಡೇಬಾವಿ, ರಾಮನಗರ, ಗುಂಡ್ಲುಪೇಟೆ, ಗುಬ್ಬಿ, ಚಿತ್ರದುರ್ಗ, ಪರಶುರಾಂಪುರ, ಮದ್ದೂರು, ಕುಣಿಗಲ್, ಹಿರಿಯೂರು, ಬೆಳ್ಳೂರು, ನಂಜನಗೂಡು, ತಿಪಟೂರು, ಮಂಕಿ, ಕೃಷ್ಣರಾಜಸಾಗರ, ಕಿಬ್ಬನಹಳ್ಳಿ, ಬಂಡೀಪುರದಲ್ಲಿ ಮಳೆಯಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !