ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದ ಕರಾವಳಿ ಭಾಗ ಮತ್ತು ಪಶ್ಚಿಮಘಟ್ಟ ಭಾಗಗಳಲ್ಲಿ ಗಾಳಿ ಬೀಸುತ್ತಿರುವ ಪರಿಣಾಮ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಮುಂದಿನ ಎರಡು ದಿನ ಬಿರುಸಾಗಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ. ಆ.7ರವರೆಗೆ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ.