Monday, December 1, 2025

WEATHER | ರಾಜ್ಯದಲ್ಲಿ ಮುಂದುವರಿದ ಮಳೆ, ಇಂದು ಯಾವೆಲ್ಲಾ ಜಿಲ್ಲೆಯಲ್ಲಿ ವರ್ಷಧಾರೆ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಇಂದು ಸಹ ಹಲವು ಜಿಲ್ಲೆಗಳಿಗೆ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ ಒಂದು ವಾರ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ, ಮಲೆನಾಡು ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

error: Content is protected !!