Tuesday, September 9, 2025

WEATHER | ರಾಜ್ಯದಲ್ಲಿ ಹಲವೆಡೆ ಮಳೆ ಅಬ್ಬರ ಕಡಿಮೆ! ಆದರೂ ಈ ಜಿಲ್ಲೆಗಳಲ್ಲಿ ವರ್ಷಧಾರೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರ ಕೊಂಚ ತಗ್ಗಿದ್ದು, ಇಂದು ರಾಜ್ಯದ ಹಲವೆಡೆ ಮಳೆ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಗ್ರಾಮಾಂತರ ಸೇರಿ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಜು.30ರಿಂದ ಯಾವುದೇ ಜಿಲ್ಲೆಗಳಿಗೆ ಮಳೆ ಅಲರ್ಟ್ ಇಲ್ಲ. ಬುಧವಾರದಿಂದ ಮಳೆ ಇಳಿಕೆಯಾಗಲಿದ್ದು, ಮುಂದಿನ ವಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮತ್ತೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇದನ್ನೂ ಓದಿ