May 1, 2026
Friday, May 1, 2026
spot_img

WEATHER | ರಾಜ್ಯಾದ್ಯಂತ ಇಂದಿನಿಂದ ಭಾರೀ ಮಳೆ: ಯಾವ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕರ್ನಾಟಕದಾದ್ಯಂತ ಇಂದಿನಿಂದ ಮಳೆ ಚುರುಕಾಗಲಿದ್ದು, 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಕರಾವಳಿಯಲ್ಲಿ ಆಗಸ್ಟ್​ 19ರ ಬಳಿಕ ಮಳೆ ಮತ್ತಷ್ಟು ಹೆಚ್ಚಾಗಲಿದ್ದು, ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

ಇನ್ನುಳಿದಂತೆ, ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಗದಗದಲ್ಲಿ ಮಳೆಯಾಗಲಿದೆ.ವಾಯುಭಾರ ಕುಸಿತ ಹಾಗೂ ಚಂಡಮಾರುತದ ಪ್ರಭಾವ ಹೆಚ್ಚಾಗಿದೆ. ದೇಶದಾದ್ಯಂತ ಧಾರಾಕಾರ ಮಳೆ ಮುಂದುವರಿದಿದ್ದು ಕರ್ನಾಟಕದಲ್ಲೂ ಮಳೆ ಆರ್ಭಟ ಹೆಚ್ಚಾಗಿದೆ.

ಆಳಂದ, ಆಗುಂಬೆ, ಮಂಕಿ, ಕುಂದಾಪುರ, ಶಕ್ತಿನಗರ, ಕಕ್ಕೇರಿ, ಕುಮಟಾ, ಗೋಕರ್ಣ, ಸಿದ್ದಾಪುರ, ಕದ್ರಾ, ಗೇರುಸೊಪ್ಪ, ಮಂಗಳೂರು, ಕಾರ್ಕಳ, ಗುತ್ತಲ್, ಜಗಳೂರು, ಚನ್ನಗಿರಿ, ದಾವಣಗೆರೆ, ಹೊನ್ನಾವರ, ಬೆಳ್ತಂಗಡಿ, ಉಪ್ಪಿನಂಗಡಿ, ಮಾಣಿ, ಬನವಾಸಿ, ಸವಣೂರು, ಗಾಣಗಾಪುರದಲ್ಲಿ ಮಳೆಯಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !