October 15, 2026
Thursday, October 15, 2026
spot_img

WEATHER | ರಾಜ್ಯದಲ್ಲಿ ಇವತ್ತು ಕೂಡ ಮಳೆಯಾಗುವ ಎಲ್ಲಾ ಲಕ್ಷಣಗಳು ಇದ್ಯಂತೆ: 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದ ಹಲವು ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಮಳೆ ಚಟುವಟಿಕೆ ಹೆಚ್ಚಾಗಿದ್ದು, ಇಂದು ಸಹ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದರ ಬೆನ್ನಲ್ಲೇ 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರದಲ್ಲೂ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಸಂಜೆ ಅಥವಾ ರಾತ್ರಿ ವೇಳೆ ಸಾಧಾರಣ ಮಳೆಯ ಸಾಧ್ಯತೆ ಇದೆ.

ಇದನ್ನೂ ಓದಿ:

ಇಂದು ಕಲಬುರ್ಗಿ, ಧಾರವಾಡ, ಗದಗ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಕೊಡಗು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು-ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಕರಾವಳಿ ಭಾಗದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ತೀವ್ರಗೊಳ್ಳುವ ಸಾಧ್ಯತೆ ಇದ್ದು, ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲೂ ಸಂಜೆ ವೇಳೆಗೆ ಮಳೆ ಹೆಚ್ಚಾಗಬಹುದು. ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಕೋಲಾರ ಭಾಗಗಳಲ್ಲೂ ಸಾಧಾರಣ ಮಳೆಯ ಮುನ್ಸೂಚನೆ ನೀಡಲಾಗಿದೆ.

Must Read