ರಾಜ್ಯದಲ್ಲಿ ಇನ್ನೂ ಒಂದು ವಾರ ಭಾರೀ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕೆಲವೊಮ್ಮೆ ಗಾಳಿಯು ಗಂಟೆಗೆ 50 ಕಿಮೀ ವೇಗದಲ್ಲಿ ಬೀಸುತ್ತದೆ, ಗುಡುಗು ಮತ್ತು ಮಿಂಚು ಇರಲಿದೆ.
ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ದಕ್ಷಿಣ ಕನ್ನಡಕ್ಕೂ ಎಚ್ಚರಿಕೆ ನೀಡಲಾಗಿದೆ. ಮಳೆ ಮತ್ತು ಬಲವಾದ ಗಾಳಿ (40-50 km/h) ಬೀಸುವ ಸಾಧ್ಯತೆ.
ಬಾಗಲಕೋಟೆ, ಕೊಪ್ಪಳ, ಧಾರವಾಡ, ಹಾವೇರಿ, ಬೆಳಗಾವಿ ಮತ್ತು ಗದಗ ಜಿಲ್ಲೆಗಳಲ್ಲಿ ಕೆಲವೆಡೆ ಭಾರಿ ಗಾಳಿ (40-50 ಕಿ.ಮೀ.) ಬೀಸುವ ಸಾಧ್ಯತೆ ಇದೆ. ಶಿವಮೊಗ್ಗದ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿ ಕೆಲವೆಡೆ ತುಂತುರು ಮಳೆಯಾಗುವ ಸಾಧ್ಯತೆ ಇದೆ.