Sunday, January 11, 2026

WEATHER | ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ತುಂತುರು ಸ್ವಾಗತ: 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಅಲರ್ಟ್!

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಜಾನೆಯಿಂದಲೇ ತುಂತುರು ಮಳೆ ಶುರುವಾಗಿದ್ದು, ತಂಪಾದ ವಾತಾವರಣ ಮುಂದುವರೆದಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾದ ಚಂಡಮಾರುತದ ಪರಿಣಾಮದಿಂದಾಗಿ ಆಂಧ್ರಪ್ರದೇಶ, ತಮಿಳುನಾಡು ಹಾಗೂ ಕರ್ನಾಟಕದ ಆಯ್ದ ಭಾಗಗಳಲ್ಲಿ ಇನ್ನೂ ಒಂದೆರಡು ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಸೇರಿದಂತೆ ಒಟ್ಟು 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಡಿಸೆಂಬರ್ 4ರವರೆಗೂ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.

ಮಳೆ ಜೊತೆಗೆ ಚಳಿಯ ಅಬ್ಬರವೂ ಹೆಚ್ಚಿದ್ದು, ವಿಜಯಪುರ ಹಾಗೂ ಬೀದರ್‌ನಲ್ಲಿ 12.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಮುಂದಿನ ಒಂದೆರಡು ದಿನಗಳಲ್ಲಿ ಕನಿಷ್ಠ ಉಷ್ಣಾಂಶವು ಮತ್ತಷ್ಟು ಇಳಿಕೆಯಾಗುವ ನಿರೀಕ್ಷೆಯಿದೆ.

error: Content is protected !!