October 15, 2026
Thursday, October 15, 2026
spot_img

WEATHER | ಬೆಂಕಿ ಉಗುಳುತ್ತಿದ್ದಾನೆ ಭಾಸ್ಕರ: ಕರುನಾಡಿಗೆ 45 ಡಿಗ್ರಿ ತಾಪಮಾನದ ಶಾಕ್

ರಾಜ್ಯಾದ್ಯಂತ ಸೂರ್ಯನ ಪ್ರತಾಪ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ತಾಪಮಾನ ಗರಿಷ್ಠ ಮಟ್ಟ ತಲುಪಿದ್ದು, ಮುಂದಿನ ಎರಡು ದಿನಗಳಲ್ಲಿ ಪರಿಸ್ಥಿತಿ ಇನ್ನಷ್ಟು ಗಂಭೀರವಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಮುಖ್ಯವಾಗಿ ಕರಾವಳಿ ಮತ್ತು ಕಲ್ಯಾಣ ಕರ್ನಾಟಕದ ಭಾಗಗಳಲ್ಲಿ ಬಿಸಿಲ ಝಳ ವಿಪರೀತವಾಗಿದ್ದು, ತಾಪಮಾನವು 45°C ವರೆಗೆ ಏರುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ‘ಹೀಟ್ ವೇವ್’ ಮುನ್ನೆಚ್ಚರಿಕೆ ನೀಡಲಾಗಿದೆ.

ಬಿಸಿಲಿನ ನಡುವೆಯೇ ಕೆಲವು ಜಿಲ್ಲೆಗಳಿಗೆ ವರುಣನ ಸಿಂಚನವಾಗುವ ಸಾಧ್ಯತೆಯೂ ಇದೆ. ಬಾಗಲಕೋಟೆ, ಬೆಳಗಾವಿ, ಕಲಬುರ್ಗಿ, ವಿಜಯಪುರ ಸೇರಿದಂತೆ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

Must Read