ಕರ್ನಾಟಕದ ಒಳನಾಡಿನ ಹಲವೆಡೆ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜೂನ್ 14 ರಂದು, ದಕ್ಷಿಣ ಒಳನಾಡಿನ ಹಲವೆಡೆ ಮತ್ತು ಉತ್ತರ ಒಳನಾಡಿನ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಜೂನ್ 16ರವರೆಗೆ ಇದೇ ಪರಿಸ್ಥಿತಿ ಇರಲಿದೆ ಎಂದು ವರದಿಯಾಗಿದೆ.
ಮುಂದಿನ 48 ಗಂಟೆಗಳ ಕಾಲ ಮೋಡ ಕವಿದ ವಾತಾವರಣವಿರುತ್ತದೆ. ಹಗುರದಿಂದ ಸಾಧಾರಣ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ° C ಮತ್ತು 21 ° C ಆಗಿದೆ.