ರಾಜ್ಯದ ಹಲವೆಡೆ ತೀವ್ರ ಚಳಿಗಾಳಿ ಬೀಸುತ್ತಿದೆ. ಬೀದರ್, ರಾಯಚೂರು, ಕಲಬುರಗಿ, ವಿಜಯಪುರದಲ್ಲಿ ತೀವ್ರ ಚಳಿಯಿಂದಾಗಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಡಿ.21ರಿಂದ ಮತ್ತೆ ಮಳೆಯಾಗುವ ಸಾಧ್ಯತೆ ಇದ್ದು, ಡಿ.21ರಿಂದ 23ರವರೆಗೆ ಬೆಂಗಳೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಚಿತ್ರದುರ್ಗ ಹಾಸನ, ವಿಜಯನಗರದಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.