ರಾಜ್ಯದಲ್ಲಿ ಮಳೆಯ ಪ್ರಮಾಣ ತಗ್ಗಿದ್ದು, ಮಲೆನಾಡಿನ ಕೆಲವೆಡೆ ಮಳೆಯಾಗುತ್ತಿದೆ. ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡದಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.