ಬೆಂಗಳೂರು, ದಕ್ಷಿಣ ಒಳನಾಡು ಮತ್ತು ಕರಾವಳಿ ಕರ್ನಾಟಕ ಭಾಗಗಳಲ್ಲಿ ಈ ವಾರ ಮುಂಗಾರುಪೂರ್ವ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಾದ್ಯಂತ ತಾಪಮಾನ ಹೆಚ್ಚುತ್ತಿರುವ ಸಂದರ್ಭದಲ್ಲೇ ಐಎಂಡಿ ಈ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ, ಮಾರ್ಚ್ 12 ರಿಂದ 17 ರವರೆಗೆ ಬೆಂಗಳೂರು ನಗರ ಸೇರಿದಂತೆ 12 ಜಿಲ್ಲೆಗಳಲ್ಲಿ ತುಂತುರು ಮಳೆ ಮತ್ತು ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಸ್ವಲ್ಪ ಮಟ್ಟಿನ ಮಳೆಯಾದರೂ ತಾಪಮಾನ ಏರಿಕೆಯಿಂದ ಮುಕ್ತಿ ದೊರೆಯದೇ ಇರಬಹುದು. ಬೆಂಗಳೂರು ನಗರದಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 34 ಮತ್ತು 20 ಡಿಗ್ರಿ ಸೆಲ್ಶಿಯಸ್ ಆಗುವ ಸಾಧ್ಯತೆಯಿದೆ.