ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಲಘು ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನಲ್ಲಿ ಶುಷ್ಕ ಗಾಳಿಯು ಮೇಲುಗೈ ಸಾಧಿಸುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರದ ಬೀದರ್, ಕಲಬುರಗಿ, ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಅಲ್ಪ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಒಣ ಹವೆ ಇರಲಿದೆ.
ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ ಇಲ್ಲ. ಬದಲಾಗಿ, ಶುಷ್ಕ ಹವಾಮಾನ ಇರುತ್ತದೆ. ಬೆಂಗಳೂರಿನಲ್ಲಿ ಯಾವುದೇ ಗಮನಾರ್ಹ ಹವಾಮಾನ ಬದಲಾವಣೆಗಳಿಲ್ಲ.
ಏಪ್ರಿಲ್ 18 ಮತ್ತು 19 ರಂದು ದಕ್ಷಿಣ ಒಳಭಾಗ, ಉತ್ತರ ಒಳಭಾಗ ಮತ್ತು ಕರಾವಳಿ ಕರ್ನಾಟಕದ ಮೇಲ್ಮೈ ಗಾಳಿಯ ವೇಗ ಗಂಟೆಗೆ 30-40 ಕಿಮೀ ತಲುಪುವ ನಿರೀಕ್ಷೆಯಿದೆ.