ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಆ.6ರವರೆಗೂ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.