WEATHER | ಇಂದು ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ!

ಜೂನ್ 22 ರಂದು ಕರ್ನಾಟಕದ ಕರಾವಳಿ ಮತ್ತು ಗುಡ್ಡಗಾಡು ಪ್ರದೇಶಗಳಲ್ಲಿ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಮತ್ತು ಉತ್ತರ ಒಳಭಾಗದಲ್ಲಿ ಲಘು ಮಳೆಯಾಗಲಿದೆ.

ರಾಜ್ಯದ ಕೆಲವು ಭಾಗಗಳಲ್ಲಿ ಗಂಟೆಗೆ 30-40 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಐಎಂಡಿ ರೆಡ್ ಮತ್ತು ಆರೆಂಜ್ ಅಲರ್ಟ್ ಘೋಷಿಸಿದೆ.

ಬೆಳಗಾವಿ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯಲ್ಲಿ ಚಂಡಮಾರುತದ ಹಿನ್ನೆಲೆಯಲ್ಲಿ ಜೂ.24ರವರೆಗೆ ಮೀನುಗಾರಿಕೆಗೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ.

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!