ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದಲ್ಲಿ ಮಳೆಯ ಅಲೆ ಮುಂದುವರಿದಿದ್ದು, ಇಂದು ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಳಗಾವಿ, ಬೀದರ್ ಮತ್ತು ಕಲಬುರಗಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮಳೆಯಾಗುವ ನಿರೀಕ್ಷೆ ಇದ್ದು, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕೆಲ ಭಾಗಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರು ನಗರದಲ್ಲಿ ದಿನವಿಡೀ ಮೋಡ ಕವಿದ ವಾತಾವರಣ ಇರುತ್ತದೆ. ಸಂಜೆ ವೇಳೆಗೆ ಕೆಲವೆಡೆ ಮಳೆಯಾಗಬಹುದು ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ 24 ಡಿಗ್ರಿ, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುವ ನಿರೀಕ್ಷೆಯಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು, ನಾಗರಿಕರು ಜಾಗರೂಕತೆಯಿಂದ ಇರಲು ಹವಾಮಾನ ಇಲಾಖೆ ಸಲಹೆ ನೀಡಿದೆ. ವಿಶೇಷವಾಗಿ ಮಳೆ ಹೆಚ್ಚಾಗಿ ಸುರಿಯುವ ಜಿಲ್ಲೆಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ಅಗತ್ಯ.