WEATHER | ಗುಡುಗು ಸಹಿತ ಮಳೆ ಸಾಧ್ಯತೆ, ಕರಾವಳಿ, ಮಲೆನಾಡಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ಬೀದರ್, ಕಲಬುರಗಿ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ನಿರಂತರ ಗಾಳಿಯ ವೇಗ ಗಂಟೆಗೆ 40-50 ಕಿ.ಮೀ. ಇರಲಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಪ್ರದೇಶಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ಗಂಟೆಗೆ 30-40 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ.

ಇಂದು ಭಾರೀ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!