ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಕೆಲವೆಡೆ ಮಳೆಯಾಗುವ ನಿರೀಕ್ಷೆ ಇದೆ. ಸಂಜೆ ವೇಳೆಗೆ ಗಾಳಿಯ ವೇಗ ಗಂಟೆಗೆ 60-70 ಕಿ.ಮೀ. ಇರಲಿದೆ, ಇಂದಿನಿಂದ ಡಿಸೆಂಬರ್ 3 ರವರೆಗೆ ದಕ್ಷಿಣ ಒಳನಾಡಿನಲ್ಲಿ ಮತ್ತು ಕರಾವಳಿ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 14 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.