ಇಂದು ರಾಜ್ಯದ ಹಲವೆಡೆ ಮೋಡ ಕವಿದ ವಾತಾವರಣ ಇರಲಿದೆ. ಇನ್ನೂ ಕೆಲವು ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಹಾಸನದ ಕೆಲವೆಡೆ ಹಗುರ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ ಎಂದು ವರದಿ ಮಾಡಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರು, ಬಾಗಲಕೋಟೆ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.