ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ ಬೆಂಗಳೂರು ಸೇರಿದಂತೆ ಕೆಲವು ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಬೆಳಗ್ಗೆ ಮತ್ತು ಸಂಜೆ ಚಳಿ ಹವಾಮಾನ ಇರಲಿದೆ ಎಂದು ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.