March 31, 2026
Tuesday, March 31, 2026
spot_img

WEATHER | ರಾಜ್ಯದಲ್ಲಿ ಮೂರು ದಿನ ಮೋಡ ಮುಸುಕಿದ ಬಾನು: ಕೆಲವೆಡೆ ಮಳೆ ಕೂಡ ಆಗುತ್ತಂತೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಸಾಮಾನ್ಯವಾಗಿ ಒಣಹವೆಯೇ ಮುಂದುವರಿದರೂ, ಹಲವೆಡೆ ಮೋಡ ಕವಿದ ವಾತಾವರಣ ಕಾಣಿಸಿಕೊಳ್ಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೆಲ ಪ್ರದೇಶಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯೂ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನವು ಸುಮಾರು 33 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ಇರಬಹುದು ಎಂದು ಅಂದಾಜಿಸಲಾಗಿದೆ. ಕರಾವಳಿ ಭಾಗಗಳಲ್ಲಿ ತಾಪಮಾನ ಸ್ವಲ್ಪ ಕಡಿಮೆಯಾಗಿದ್ದು, ಮಂಗಳೂರಿನಲ್ಲಿ 31-25 ಡಿಗ್ರಿ, ಉಡುಪಿಯಲ್ಲಿ 31-24 ಡಿಗ್ರಿ ಮತ್ತು ಕಾರವಾರದಲ್ಲಿ 29-24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.

ಇದನ್ನೂ ಓದಿ:

ಒಟ್ಟಾರೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲಿನ ಜೊತೆಗೆ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಿಡಿಲು-ಗುಡುಗು ಸಹಿತ ಸಣ್ಣ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !