WEATHER | ವರುಣನ ರೌದ್ರಾವತಾರಕ್ಕೆ ಕರಾವಳಿ-ಮಲೆನಾಡು ಭಾಗದ ಜನಜೀವನ ತತ್ತರ

ಕರ್ನಾಟಕದ ಕರಾವಳಿಯಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಎಚ್ಚರಿಕೆ ನೀಡಲಾಗಿದ್ದು, ಮಲೆನಾಡಿನಲ್ಲಿ ಸಾಧಾರಣ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಮತ್ತು ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಗುಡುಗು ಸಹಿತ ಭಾರೀ ಮಳೆ ಮತ್ತು ಗಂಟೆಗೆ 40-50 ಕಿಮೀ ವೇಗದಲ್ಲಿ ಗಾಳಿ ಬೀಸುವ ನಿರೀಕ್ಷೆಯಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಹಾಸನ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ ಮತ್ತು ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!