Thursday, January 1, 2026

WEATHER | ಹೊಸ ವರ್ಷಕ್ಕೆ ಚಳಿ ಎಫೆಕ್ಟ್: ರಾಜ್ಯದ ಹಲವೆಡೆ ತಾಪಮಾನ ಇಳಿಕೆ, ಮೋಡ ಕವಿದ ವಾತಾವರಣ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹೊಸ ವರ್ಷದ ಮೊದಲ ದಿನವೇ ಕರ್ನಾಟಕದ ವಾತಾವರಣದಲ್ಲಿ ಗಮನಾರ್ಹ ಬದಲಾವಣೆ ಕಂಡುಬಂದಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಜಾನೆ ಮಂಜು ಆವರಿಸಿಕೊಂಡಿದ್ದು, ಚಳಿಯ ಪ್ರಭಾವ ಹೆಚ್ಚಾಗಿದೆ. ಬೆಂಗಳೂರು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದ್ದು, ದಿನದ ತಾಪಮಾನ ಸಾಮಾನ್ಯ ಮಟ್ಟದಲ್ಲಿದ್ದರೂ ಬೆಳಿಗ್ಗೆ ಮತ್ತು ರಾತ್ರಿ ವೇಳೆ ತಂಪು ಹೆಚ್ಚಾಗಿದೆ.

ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನ 13ರಿಂದ 19 ಡಿಗ್ರಿ ಸೆಲ್ಸಿಯಸ್ ನಡುವೆ ದಾಖಲಾಗುವ ಸಾಧ್ಯತೆ ಇದ್ದು, ಗರಿಷ್ಠ ತಾಪಮಾನ 27ರಿಂದ 28 ಡಿಗ್ರಿ ಸೆಲ್ಸಿಯಸ್‌ವರೆಗೆ ಇರಲಿದೆ. ನಗರದಲ್ಲಿ ಮುಂದಿನ ಕೆಲವು ದಿನಗಳವರೆಗೆ ಮಳೆಯ ಮುನ್ಸೂಚನೆ ಇಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಒಣ ಹವಾಮಾನ ಮುಂದುವರಿಯಲಿದೆ.

ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಚಳಿ ಮತ್ತಷ್ಟು ತೀವ್ರವಾಗಿದೆ. ಬೀದರ್, ವಿಜಯಪುರ ಹಾಗೂ ಕಲಬುರಗಿ ಭಾಗಗಳಲ್ಲಿ ಶೀತ ಅಲೆ ಪರಿಸ್ಥಿತಿ ಕಂಡುಬಂದಿದ್ದು, ಬೀದರ್‌ನಲ್ಲಿ ಕನಿಷ್ಠ ತಾಪಮಾನ 6.4 ಡಿಗ್ರಿ ಸೆಲ್ಸಿಯಸ್‌ಗೆ ಇಳಿಕೆಯಾಗಿದೆ.

ದಕ್ಷಿಣ ಒಳನಾಡಿನಲ್ಲಿ ಚಿಕ್ಕಮಗಳೂರು, ಹಾಸನ, ತುಮಕೂರು, ಕೋಲಾರ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ತಂಪಾದ ವಾತಾವರಣ ಮುಂದುವರಿದಿದೆ. ಕರಾವಳಿ ಕರ್ನಾಟಕದಲ್ಲಿ ತುಸು ಬೆಚ್ಚಗಿನ ಹಾಗೂ ತೇವಾಂಶಯುಕ್ತ ವಾತಾವರಣವಿದ್ದು, ಕನಿಷ್ಠ ತಾಪಮಾನ 19ರಿಂದ 20 ಡಿಗ್ರಿ ಸೆಲ್ಸಿಯಸ್ ನಡುವೆ ಇರಲಿದೆ. ಮಂಗಳೂರು ಭಾಗದಲ್ಲಿ ಗರಿಷ್ಠ ತಾಪಮಾನ 28ರಿಂದ 30 ಡಿಗ್ರಿ ಸೆಲ್ಸಿಯಸ್‌ವರೆಗೆ ದಾಖಲಾಗುವ ನಿರೀಕ್ಷೆಯಿದೆ.

error: Content is protected !!