ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಚಳಿಗಾಲದ ಪ್ರಭಾವ ಮತ್ತಷ್ಟು ಹೆಚ್ಚಾಗಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಇಂದು ಕೂಡ ತೀವ್ರ ಚಳಿ ಮತ್ತು ಒಣ ಹವಾಮಾನ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಚಳಿಯ ತೀವ್ರತೆ ಹೆಚ್ಚಾಗಿದ್ದು, ಹವಾಮಾನದಲ್ಲಿ ತೇವಾಂಶದ ಕೊರತೆಯಿಂದ ಒಣ ಗಾಳಿಯ ವಾತಾವರಣ ಕಾಣಿಸಿಕೊಂಡಿದೆ. ಕರಾವಳಿ ಜಿಲ್ಲೆಗಳಲ್ಲಿಯೂ ಸಹ ಸಾಮಾನ್ಯವಾಗಿ ತಂಪಾದ ಹವಾಮಾನ ಇದ್ದರೂ, ಮಳೆಯಿಲ್ಲದ ಕಾರಣ ಒಣತನ ಸ್ಪಷ್ಟವಾಗಿದೆ.
ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಇಂದು ಮುಂಜಾನೆಯ ಸಮಯದಲ್ಲಿ ಮಂಜು ಕವಿದ ವಾತಾವರಣ ಕಂಡುಬರುವ ಸಾಧ್ಯತೆ ಇದೆ. ನಗರದ ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ಗೆ ಇಳಿಯುವ ನಿರೀಕ್ಷೆಯಿದ್ದು, ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ವರೆಗೆ ಏರಲಿದೆ.


