Monday, December 15, 2025

WEATHER | ಚಳಿಯ ಅಬ್ಬರ: ಬೆಂಗಳೂರಿನಲ್ಲಿ ದಾಖಲೆಯ ಕುಸಿತ, ಹಲವೆಡೆ ‘ಶೀತದ ಅಲೆ’ ಎಚ್ಚರಿಕೆ!

ರಾಜ್ಯದಾದ್ಯಂತ ಮೈ ಕೊರೆಯುವ ಚಳಿಯ ವಾತಾವರಣ ಮುಂದುವರಿದಿದ್ದು, ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ಕನಿಷ್ಠ ತಾಪಮಾನದಲ್ಲಿ ಭಾರೀ ಇಳಿಕೆಯಾಗಿದ್ದು, ನಾಗರಿಕರು ಬೆಚ್ಚಗಿರಲು ಪರದಾಡುತ್ತಿದ್ದಾರೆ.

ಕಳೆದ ಎರಡು ದಿನಗಳಿಂದ ಬೆಂಗಳೂರು ನಗರದಲ್ಲಿ ಕನಿಷ್ಠ ತಾಪಮಾನ 14 ರಿಂದ 15 ಡಿಗ್ರಿ ಸೆಲ್ಸಿಯಸ್‌ನಷ್ಟು ದಾಖಲಾಗಿದ್ದರೆ, ಹೆಚ್‌ಎಎಲ್ ವ್ಯಾಪ್ತಿಯಲ್ಲಿ ಇದು 13 ಡಿಗ್ರಿ ಸೆಲ್ಸಿಯಸ್‌ನಷ್ಟು ತೀವ್ರ ಇಳಿಕೆ ಕಂಡಿದೆ.

ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳಲ್ಲಿ ಶೀತದ ಅಲೆಗಳು ಉಂಟಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಗದಗ, ಚಿಕ್ಕಮಗಳೂರು ಮತ್ತು ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅತಿ ಹೆಚ್ಚು ಚಳಿಯ ಮುನ್ಸೂಚನೆಯಿರುವ ಬಾಗಲಕೋಟೆ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಈ ಚಳಿಯ ವಾತಾವರಣವು ಡಿಸೆಂಬರ್ 17 ರಿಂದ ಸ್ವಲ್ಪ ಮಟ್ಟಿಗೆ ಕಡಿಮೆಯಾಗುವ ನಿರೀಕ್ಷೆಯಿದೆ. ಆದರೆ, ಅಲ್ಲಿಯವರೆಗೆ ಆರೋಗ್ಯದ ಬಗ್ಗೆ ವಿಶೇಷ ಎಚ್ಚರ ವಹಿಸುವುದು ಅನಿವಾರ್ಯ ಎಂದು ವೈದ್ಯರು ಸಲಹೆ ನೀಡಿದ್ದಾರೆ.

error: Content is protected !!