November 19, 2026
Thursday, November 19, 2026
spot_img

WEATHER | ರಾಜ್ಯದಲ್ಲಿ ಹೆಚ್ಚಲಿದೆ ಚಳಿಯ ಅಬ್ಬರ: ಕರಾವಳಿ ತೀರಕ್ಕೆ ‘ಅಕ್ವಾನ್’ ಚಂಡಮಾರುತದ ಭೀತಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯಾದ್ಯಂತ ಸದ್ಯ ಮಳೆಗೆ ಸಂಪೂರ್ಣ ವಿರಾಮ ಬಿದ್ದಿದ್ದು, ಎಲ್ಲೆಡೆ ಒಣಹವೆ ಮುಂದುವರಿದಿದೆ. ಮುಂದಿನ ಎರಡು ದಿನಗಳ ಕಾಲವೂ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇದೇ ಶುಷ್ಕ ವಾತಾವರಣ ಇರಲಿದ್ದು, ಕನಿಷ್ಠ ತಾಪಮಾನದಲ್ಲಿ ಗಣನೀಯ ಇಳಿಕೆಯಾಗುವ ಮೂಲಕ ಚಳಿಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಎಲ್ಲೆಲ್ಲಿ ಒಣಹವೆ ಮುಂದುವರಿಕೆ?

ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಮಳೆಯ ಯಾವುದೇ ಮುನ್ಸೂಚನೆ ಇಲ್ಲ. ಇನ್ನು ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.

ಅದೇ ರೀತಿ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲೂ ಬಿಸಿಲು ಮತ್ತು ಚಳಿಯ ವಾತಾವರಣ ಇರಲಿದೆ.

ದಿಕ್ಕು ಬದಲಿಸಿದ ‘ಅಕ್ವಾನ್’ ಚಂಡಮಾರುತ

ಮತ್ತೊಂದೆಡೆ, ಬಂಗಾಳ ಕೊಲ್ಲಿಯಲ್ಲಿ ತೀವ್ರಗೊಂಡಿರುವ ‘ಅಕ್ವಾನ್’ ಚಂಡಮಾರುತವು ತನ್ನ ಪಥವನ್ನು ಬದಲಿಸಿದ್ದು, ಒಡಿಶಾ ಕರಾವಳಿಯತ್ತ ವೇಗವಾಗಿ ಸಾಗುತ್ತಿದೆ. ಈ ಮೊದಲು ಆಂಧ್ರಪ್ರದೇಶಕ್ಕೆ ಅಪ್ಪಳಿಸುವ ಭೀತಿ ಹುಟ್ಟಿಸಿದ್ದ ಈ ಚಂಡಮಾರುತ ದಿಕ್ಕು ಬದಲಿಸಿರುವುದರಿಂದ ಆಂಧ್ರದ ಜನತೆಗೆ ಕೊಂಚ ನಿರಾಳತೆ ಸಿಕ್ಕಿದೆ. ಆದರೂ, ಚಂಡಮಾರುತದ ಪ್ರಭಾವದಿಂದ ಇಂದು ಮತ್ತು ನಾಳೆ ಆಂಧ್ರಪ್ರದೇಶ ಹಾಗೂ ಒಡಿಶಾದ ಕರಾವಳಿ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಸಮುದ್ರ ತೀರಕ್ಕೆ ತೆರಳದಂತೆ ಕಟ್ಟೆಚ್ಚರ

ಚಂಡಮಾರುತದ ತೀವ್ರತೆಯಿಂದಾಗಿ ಗಂಟೆಗೆ 120 ರಿಂದ 145 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಸಮುದ್ರದಲ್ಲಿ ಬೃಹತ್ ಅಲೆಗಳು ಏಳುವ ಎಚ್ಚರಿಕೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಮೀನುಗಾರರು ಮತ್ತು ಸಾರ್ವಜನಿಕರು ಸಮುದ್ರ ತೀರಕ್ಕೆ ಇಳಿಯದಂತೆ ಭಾರತೀಯ ಹವಾಮಾನ ಇಲಾಖೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದು, ಎರಡೂ ರಾಜ್ಯಗಳ ಕರಾವಳಿ ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಸ

Must Read

Skip to toolbar