ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಈಗಾಗಲೇ ಶೀತ ವಾತಾವರಣ ಶುರುವಾಗಿದೆ. ಡಿಸೆಂಬರ್ ಅಂತ್ಯದ ವೇಳೆಗೆ ಮತ್ತು ಜನವರಿಯಲ್ಲಿ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿಗಳಷ್ಟು ಕಡಿಮೆ ಇರುತ್ತದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 13 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.