ಮುಂದಿನ ಮೂರು ದಿನಗಳಲ್ಲಿ ರಾಜ್ಯದಲ್ಲಿ ತೀವ್ರ ಚಳಿಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಲಬುರಗಿ ಮತ್ತು ವಿಜಯಪುರದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.