ಕರ್ನಾಟಕದ ಉತ್ತರ ಒಳನಾಡಿನಲ್ಲಿ ಮುಂದಿನ ಒಂದು ವಾರ ಚಳಿಯ ಪ್ರಮಾಣ ಹೆಚ್ಚಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗದಲ್ಲೂ ಚಳಿ ಸಾಧಾರಣವಾಗಿರಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿಯೂ ಚಳಿ, ಒಣಹವೆ ಮುಂದುವರೆಯಲಿದೆ.
ಬೆಂಗಳೂರಿನಲ್ಲಿ, ಗರಿಷ್ಠ ತಾಪಮಾನವು 26 ಡಿಗ್ರಿ ಸೆಲ್ಸಿಯಸ್ ಆಗಿರುತ್ತದೆ ಮತ್ತು ಕನಿಷ್ಠ ತಾಪಮಾನವು 16 ಡಿಗ್ರಿ ಸೆಲ್ಸಿಯಸ್ ಆಗಿರುತ್ತದೆ. ಮಡಿಕೇರಿ ಗರಿಷ್ಠ 29 ಡಿಗ್ರಿ ಸೆಲ್ಸಿಯಸ್ ತಾಪಮಾನ ಮತ್ತು ಕನಿಷ್ಠ 16 ಡಿಗ್ರಿ ಸೆಲ್ಸಿಯಸ್ ತಾಪಮಾನವನ್ನು ದಾಖಲಿಸುತ್ತದೆ.