ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉಡುಪಿ, ದಕ್ಷಿಣ ಕನ್ನಡ ಮತ್ತು ಕರಾವಳಿಯ ಹಲವೆಡೆ ಬಹುತೇಕ ಕಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಮತ್ತು ಕೊಡಗಿನಲ್ಲಿ ಗುಡ್ಡಗಾಡು ಪ್ರದೇಶಗಳಲ್ಲಿ ಪ್ರತ್ಯೇಕ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಭಾಗದಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಜತೆಗೆ ಉತ್ತರ ಒಳನಾಡಿನ ಬೆಳಗಾವಿ, ಹಾವೇರಿ, ರಾಯಚೂರು, ಯಾದಗಿರಿ, ಕಲಬುರಗಿ, ಬೀದರ್ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಧಾರವಾಡ, ಬಾಗಲಕೋಟೆ, ಗದಗ, ಕೊಪ್ಪಳ ಮತ್ತು ವಿಜಯಪುರದಲ್ಲಿ ಗಂಟೆಗೆ 40-50 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.