WEATHER | ರಾಜ್ಯಾದ್ಯಂತ ಮುಂದುವರೆದ ಮಳೆ ಅಬ್ಬರ, ಯೆಲ್ಲೋ ಅಲರ್ಟ್ ಘೋಷಣೆ

ರಾಜ್ಯಾದ್ಯಂತ ಭಾರೀ ಮಳೆಯೊಂದಿಗೆ ಗಂಟೆಗೆ 30 ರಿಂದ 40 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಕರ್ನಾಟಕದಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಮತ್ತು ಉತ್ತರ ಭಾಗಗಳಲ್ಲಿ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಗುಡುಗು ಸಹಿತ ಭಾರೀ ಮಳೆಯಾಗಲಿದ್ದು, ಗಂಟೆಗೆ 45-55 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 35 ರಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ಜುಲೈ 2ರವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!