WEATHER | ರಾಜ್ಯಾದ್ಯಂತ ಮುಂದುವರೆದ ಮಳೆ ಅಬ್ಬರ, ಆರೆಂಜ್ ಅಲರ್ಟ್ ಘೋಷಣೆ

ಕರಾವಳಿ ವಲಯದಲ್ಲಿ ಭಾರೀ ಮಳೆ ಹಾಗೂ ಗುಡುಗು ಸಹಿತ ಮಳೆಯಾಗಲಿದ್ದು, ಮಲೆನಾಡಿನಲ್ಲಿ ಭಾರೀ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ. ಕೆಲವೆಡೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ದಕ್ಷಿಣದಲ್ಲಿ ಸ್ವಲ್ಪ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗಿನ ಗುಡ್ಡಗಾಡು ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಕರಾವಳಿಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಸಾಧಾರಣ ಮಳೆಯಾಗಲಿದೆ.

ಗುಡುಗು ಸಹಿತ ಭಾರೀ ಮಳೆಯಾಗಲಿದ್ದು, ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!