WEATHER | ಹವಾಮಾನ ವೈಪರಿತ್ಯದಿಂದಾಗಿ ದಿನೇದಿನೆ ತಾಪಮಾನ ಏರಿಕೆ, ಎಲ್ಲೆಲ್ಲಿ ಮಳೆ ಸಾಧ್ಯತೆ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರಾವಳಿ ಮತ್ತು ದಕ್ಷಿಣ ಒಳನಾಡಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಉಳಿದ ಭಾಗಗಳಲ್ಲಿ ಹೆಚ್ಚಾಗಿ ಒಣಹವೆ ಇರಬಹುದೆಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಾಮರಾಜನಗರ, ರಾಮನಗರ, ಬೆಂಗಳೂರು ಮತ್ತು ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಇತರ ಭಾಗಗಳಲ್ಲಿ ಒಣ ಹವೆ ಇರುತ್ತದೆ.

ಬೆಳಗಾವಿ, ಧಾರವಾಡ ಮತ್ತು ಹಾವೇರಿಯ ಉತ್ತರದ ಒಳ ಪ್ರದೇಶಗಳಲ್ಲಿ ಮಳೆಯಾಗಲಿದೆ. ಇತರ ಪ್ರದೇಶಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ ಮತ್ತು ಗಾಳಿಯು ಶುಷ್ಕವಾಗಿರುತ್ತದೆ.

ಕೊಡಗು, ಶಿವಮೊಗ್ಗ ಮತ್ತು ಹಾಸನ, ಚಿಕ್ಕಮಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಗುಡ್ಡಗಾಡು ಪ್ರದೇಶಗಳಲ್ಲಿ ಮಳೆಯಾಗಲಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ, ಉತ್ತರ ಕನ್ನಡ ಕರಾವಳಿಯಲ್ಲೂ ಗುಡುಗು ಸಹಿತ ಮಳೆಯಾಗಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!