ಬೆಂಗಳೂರು ನಗರ ಸೇರಿ ರಾಜ್ಯದ ಹಲವೆಡೆ ಬೆಳಗಿನ ಜಾವ ದಟ್ಟ ಮಂಜು ಕಾಣಿಸಿಕೊಳ್ಳಲಿದೆ. ಫೆಬ್ರವರಿವರೆಗೂ ಈ ದಟ್ಟ ಮಂಜು ಕಾಣಿಸಿಕೊಳ್ಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.