Monday, December 1, 2025

WEATHER |’ದಿತ್ವಾ’ ಎಫೆಕ್ಟ್‌: 5 ದಿನ ವರುಣನ ಆರ್ಭಟ, ಬೆಂಗಳೂರಿಗೂ ತಟ್ಟಿದ ಚಳಿ, ಮೋಡದ ಕವಚ!

ಬಂಗಾಳಕೊಲ್ಲಿಯಲ್ಲಿ ಉಂಟಾದ ‘ದಿತ್ವಾ’ ಚಂಡಮಾರುತದ ಪ್ರಭಾವದಿಂದಾಗಿ ಕರ್ನಾಟಕ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ಗಂಭೀರ ಎಚ್ಚರಿಕೆಯನ್ನು ನೀಡಿದೆ.

ರಾಜ್ಯ ಹವಾಮಾನ ಇಲಾಖೆ ನೀಡಿರುವ ಮಾಹಿತಿ ಪ್ರಕಾರ, ಇಂದಿನಿಂದ ಮುಂದಿನ ಐದು ದಿನಗಳ ಕಾಲ ಕರ್ನಾಟಕದಾದ್ಯಂತ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮಳೆಯಿಂದಾಗುವ ಅನಾಹುತಗಳನ್ನು ತಪ್ಪಿಸಲು ಸಾರ್ವಜನಿಕರು ಸೂಕ್ತ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕಿದೆ.

ರಾಜಧಾನಿ ಬೆಂಗಳೂರಿನಲ್ಲಿ ಚಂಡಮಾರುತದ ಪರೋಕ್ಷ ಪರಿಣಾಮ ಎದ್ದು ಕಾಣುತ್ತಿದ್ದು, ಮುಂದಿನ ಎರಡು ದಿನಗಳ ಕಾಲ ಇಡೀ ನಗರವು ಚಳಿ ಹಾಗೂ ಮೋಡ ಕವಿದ ವಾತಾವರಣದಿಂದ ಕೂಡಿರಲಿದೆ.

error: Content is protected !!