WEATHER | ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಒಣ ಹವೆ ಹೆಚ್ಚಾಗಲಿದೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯಾದ್ಯಂತ ಒಣಹವೆ ಮುಂದುವರಿಯಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯ ಕೆಲವು ಕರಾವಳಿ ಭಾಗಗಳಲ್ಲಿ ಗರಿಷ್ಠ ತಾಪಮಾನ 3-4 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೀದರ್, ಬಾಗಲಕೋಟೆ, ವಿಜಯಪುರ, ಕಲಬುರಗಿ ಹಾಗೂ ಬೆಳಗಾವಿ, ರಾಯಚೂರು, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಯಾದಗಿರಿಯಲ್ಲಿ 2-3 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಹೆಚ್ಚಾಗಲಿದ್ದು, ಬಿಸಿಲಿನ ಝಳವಿದೆ.

ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನ, ದಕ್ಷಿಣ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ ಸೇರಿದಂತೆ ಗುಡ್ಡಗಾಡು ಜಿಲ್ಲೆಗಳಾದ ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರಿನಲ್ಲಿ ಬಿಸಿಲಿನ ತೀವ್ರತೆ ಹೆಚ್ಚಾಗಿರುತ್ತದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!