February 26, 2026
Thursday, February 26, 2026
spot_img

WEATHER | ರಾಜ್ಯಾದ್ಯಂತ ಇಂದಿನಿಂದ ‘ಡ್ರೈ ಡೇ’: ಬೆಂಗಳೂರಿನಲ್ಲಿ ಎರಡು ದಿನ ವಿಪರೀತ ಚಳಿ

ಇಂದಿನಿಂದ ರಾಜ್ಯದೆಲ್ಲೆಡೆ ಒಣ ಹವೆಯ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕಳೆದ ಕೆಲವು ದಿನಗಳಿಂದ ಬೆಂಗಳೂರಿನಲ್ಲಿ ಬದಲಾಗುತ್ತಿರುವ ಹವಾಮಾನದಂತೆ, ಇಂದೂ ಸಹ ಮಂಜು ಮುಸುಕಿದ ವಾತಾವರಣ ಇರಲಿದೆ. ಮುಖ್ಯವಾಗಿ, ಇನ್ನೆರಡು ದಿನಗಳ ಕಾಲ ರಾಜಧಾನಿ ಬೆಂಗಳೂರಿನಲ್ಲಿ ವಿಪರೀತ ಚಳಿ ಇರಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಮಳೆಯ ವಾತಾವರಣ ಸದ್ಯಕ್ಕೆ ಮರೆಯಾಗಿದ್ದು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿದಂತೆ ಕರಾವಳಿಯ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.

ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರ ಜಿಲ್ಲೆಗಳಲ್ಲೂ ಇಂದು ಒಣಹವೆ ಇರಲಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಮುಂದುವರಿಯಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !