February 26, 2026
Thursday, February 26, 2026
spot_img

WEATHER | ಅರ್ಧ ಕರ್ನಾಟಕಕ್ಕೆ ಒಣಹವೆಯಾದರೆ, ಬೆಂಗಳೂರಿಗೆ ಚಳಿಯ ಹೊಡೆತ!

ಕಳೆದ ನಾಲ್ಕು ದಿನಗಳಿಂದ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಭಾಗಗಳಲ್ಲಿ ಮೈಕೊರೆಯುವ ಚಳಿಯ ಅಬ್ಬರ ಜೋರಾಗಿದೆ. ಶೀತಗಾಳಿಯ ಪ್ರಭಾವದಿಂದಾಗಿ ದೈನಂದಿನ ಜನಜೀವನದಲ್ಲಿ ಗಮನಾರ್ಹ ಬದಲಾವಣೆ ಕಂಡುಬಂದಿದ್ದು, ರಾಜ್ಯ ಹವಾಮಾನ ಇಲಾಖೆಯು ಶೀತಗಾಳಿ ಅಲರ್ಟ್ ಅನ್ನು ಘೋಷಿಸಿದೆ.

ಬೆಂಗಳೂರಿನ ಎಚ್‌ಎಎಲ್ ಪ್ರದೇಶದಲ್ಲಿ ಕನಿಷ್ಠ ತಾಪಮಾನವು 13 ಡಿಗ್ರಿ ಸೆಲ್ಸಿಯಸ್‌ಗೆ ಇಳಿಕೆಯಾಗಿದೆ. ಹವಾಮಾನ ಇಲಾಖೆಯ ಪ್ರಕಾರ, ಮುಂದಿನ ಎರಡು ದಿನಗಳ ಕಾಲ ರಾಜಧಾನಿಯಲ್ಲಿ ಇದೇ ರೀತಿಯ ಚಳಿಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.

ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಕಳೆದ ಹಲವು ದಿನಗಳಿಂದ ಇರುವ ಒಣಹವೆಯ ವಾತಾವರಣ ಇಂದೂ ಸಹ ಮುಂದುವರಿಯಲಿದೆ.

ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿಯೂ ಒಣಹವೆ ಇರಲಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣವೇ ಮುಂದುವರಿಯಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !