WEATHER | ರಾಜ್ಯದ ಹಲವೆಡೆ ಇಂದು ಶುಷ್ಕ ವಾತಾವರಣ ಇರಲಿದೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಶುಕ್ರವಾರ ರಾಜ್ಯದ ಹಲವೆಡೆ ಒಣಹವೆ ಇರುತ್ತದೆ. ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ತೀವ್ರ ಚಳಿಯಾಗಲಿದೆ ಎಂದು ವರದಿಯಾಗಿದೆ. ಅದರಲ್ಲೂ ಬೆಳಗಾವಿ ಜಿಲ್ಲೆಯಲ್ಲಿ ಕನಿಷ್ಠ ತಾಪಮಾನ 11 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ತನ್ನ ಮುನ್ಸೂಚನೆಯಲ್ಲಿ ತಿಳಿಸಿದೆ.

ಶುಕ್ರವಾರ ಮತ್ತು ಶನಿವಾರ ಬೆಳಗಾವಿಯಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 11 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ತನ್ನ ಮುನ್ಸೂಚನೆಯಲ್ಲಿ ತಿಳಿಸಿದೆ. ಅಂದರೆ, ಈ ಭಾಗದಲ್ಲಿ ತೀವ್ರ ಚಳಿಯಾಗಲಿದೆ ಎಂಬ ಎಚ್ಚರಿಕೆ ಇದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿಯಂತಹ ಕರಾವಳಿ ಜಿಲ್ಲೆಗಳಲ್ಲಿ ಬೆಳಿಗ್ಗೆ ಕಡಿಮೆ ಚಳಿ ಮತ್ತು ಬಿಸಿಲು ಇರುತ್ತದೆ. ದಕ್ಷಿಣ ಕನ್ನಡದಲ್ಲಿ ಇನ್ನೆರಡು ದಿನಗಳಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!