November 3, 2026
Tuesday, November 3, 2026
spot_img

WEATHER | ಮುರಸು ಚಂಡಮಾರುತದ ಎಫೆಕ್ಟ್: ರಾಜ್ಯದಲ್ಲಿ ನವೆಂಬರ್ 5 ರವರೆಗೆ ಭಾರೀ ಮಳೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ‘ಮುರಸು’ ಚಂಡಮಾರುತ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಆಂಧ್ರ ಕರಾವಳಿಯ ನೆಲ್ಲೂರು ಹಾಗೂ ನರಸಾಪುರ ನಡುವೆ ಭೂಮಿಗೆ ಅಪ್ಪಳಿಸುವ ಸಾಧ್ಯತೆಯಿದೆ. ಇದರ ನೇರ ಪ್ರಭಾವದಿಂದಾಗಿ ನವೆಂಬರ್ 5ರವರೆಗೂ ಕರ್ನಾಟಕದ ಹಲವೆಡೆ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕೆಲ ದಿನಗಳ ಹಿಂದೆ ಅರ್ನಾಬ್ ಚಂಡಮಾರುತದ ಹೊಡೆತಕ್ಕೆ ಸಿಲುಕಿ ತತ್ತರಿಸಿದ್ದ ಆಂಧ್ರಪ್ರದೇಶ ಹಾಗೂ ಒಡಿಶಾ ಭಾಗಗಳಿಗೆ ಈಗ ‘ಮುರಸು’ ಹೊಸ ಆತಂಕ ತಂದಿಟ್ಟಿದೆ. ಈ ಸೈಕ್ಲೋನ್ ಕರಾವಳಿ ದಾಟುವಾಗ ಗಂಟೆಗೆ ಕನಿಷ್ಠ 100ರಿಂದ 110 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಸಮುದ್ರದಲ್ಲಿ ಅಲೆಗಳ ಅಬ್ಬರ ತೀವ್ರಗೊಂಡಿದೆ. ನೆರೆ ರಾಜ್ಯಗಳ ಜೊತೆಗೆ ಕರ್ನಾಟಕದಲ್ಲೂ ವಾಯುಭಾರ ಕುಸಿತದ ಎಫೆಕ್ಟ್ ದಟ್ಟವಾಗಿದೆ.

ಯಾವ್ಯಾವ ಜಿಲ್ಲೆಗಳಿಗೆ ಮಳೆ ಮುನ್ನೆಚ್ಚರಿಕೆ?:

ಕರಾವಳಿ ತೀರದ ಭಾಗಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಜೊತೆಗೆ ಗುಡುಗು- ಸಿಡಿಲಿನ ಮುನ್ನೆಚ್ಚರಿಕೆ ನೀಡಲಾಗಿದೆ.

ಇನ್ನು, ಉತ್ತರ ಒಳನಾಡು ಭಾಗಗಳಾದ ಬೆಳಗಾವಿ, ಹಾವೇರಿ, ಧಾರವಾಡ, ಗದಗ, ಬೀದರ್, ರಾಯಚೂರು, ಕಲಬುರಗಿ, ಕೊಪ್ಪಳ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಸಾಧಾರಣ ಮಳೆಯಾಗಬಹುದು. ಆದರೆ ವಿಜಯಪುರ ಹಾಗೂ ಬಾಗಲಕೋಟೆಯಲ್ಲಿ ಒಣ ಹವೆ ಮುಂದುವರಿಯಲಿದೆ.

ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ತುಮಕೂರು, ದಾವಣಗೆರೆ ಮತ್ತು ಚಿತ್ರದುರ್ಗ ಭಾಗಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಸುರಿಯುವ ಸಂಭವವಿದೆ. ಇನ್ನು, ಬೆಂಗಳೂರು ನಗರ, ಗ್ರಾಮಾಂತರ, ಮೈಸೂರು, ಕೋಲಾರ, ಮಂಡ್ಯ, ಹಾಸನ, ಕೊಡಗು, ಚಾಮರಾಜನಗರ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಜಿಟಿಜಿಟಿ ಅಥವಾ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ ಎಂದು ಇಲಾಖೆ ತಿಳಿಸಿದೆ.

Must Read

Skip to toolbar