ಇನ್ನು ಕೆಲವು ದಿನಗಳ ಕಾಲ ಕರ್ನಾಟಕದ ಹಲವೆಡೆ ಶೀತಗಾಳಿ ಹವಾಮಾನದ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.
ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಅಲರ್ಟ್ ಘೋಷಿಸಲಾಗಿದೆ.
ಚಿಕ್ಕಮಗಳೂರು, ಹಾಸನ, ಮಂಡ್ಯ-ದಾವಣಗೆರೆ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಹಾಗೂ ದಕ್ಷಿಣ ಒಳನಾಡಿನ ಗ್ರಾಮಾಂತರ ಪ್ರದೇಶಗಳಿಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ.