ರಾಜ್ಯದ ಜನತೆಗೆ ಹವಾಮಾನ ಇಲಾಖೆಯು ಇಂದು ಒಂದೇ ದಿನ ಎರಡು ರೀತಿಯ ಹವಾಮಾನದ ಎಚ್ಚರಿಕೆ ನೀಡಿದೆ. ಬೆಂಗಳೂರು ಸೇರಿದಂತೆ ಕರಾವಳಿ ಭಾಗದಲ್ಲಿ ಇಂದು ಅತೀ ಹೆಚ್ಚು ತಾಪಮಾನ ದಾಖಲಾಗುವ ಸಾಧ್ಯತೆಯಿದೆ.
ವಿಶೇಷವಾಗಿ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ತೀವ್ರವಾದ ಬಿಸಿಗಾಳಿ ಬೀಸಲಿದ್ದು, ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ.
ಆದರೆ, ದಿನವಿಡೀ ಕಾಡುವ ಬಿಸಿಲಿನ ನಡುವೆ ಸಂಜೆ ವೇಳೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಮೂಲಕ ವರುಣ ತಂಪು ಎರೆಯಲಿದ್ದಾನೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.



