ಇಂದು ಕೂಡ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಬೆಂಗಳೂರು ನಗರದಲ್ಲಿ ಕನಿಷ್ಠ ತಾಪಮಾನ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಆದರೆ, ಇದರ ಪರಿಣಾಮ ಬೆಂಗಳೂರು ಹೊರತುಪಡಿಸಿ ದಕ್ಷಿಣ ಒಳನಾಡಿನ ಮೇಲೂ ಪರಿಣಾಮ ಬೀರಲಿದೆ. ಚಾಮರಾಜನಗರ, ಮೈಸೂರು, ಕೊಡಗು ಮತ್ತು ರಾಮನಗರ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಪ್ರದೇಶಗಳಲ್ಲಿ ಹಲವೆಡೆ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗಬಹುದು.
ಬೆಂಗಳೂರು ಗ್ರಾಮಾಂತರ, ಕೋಲಾರ, ಮಂಡ್ಯ, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಮತ್ತು ಕರಾವಳಿ ಪ್ರದೇಶಗಳಲ್ಲಿ ಕೆಲವೆಡೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.