Monday, August 8, 2022

Latest Posts

ಕೇರಳದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ: ಇಂದು ಕಾಸರಗೋಡಿನಲ್ಲಿ ಆರೆಂಜ್ ಅಲರ್ಟ್

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ಕಾಸರಗೋಡು:

ಕೇರಳದಲ್ಲಿ ಸೋಮವಾರವೂ ಸೇರಿದಂತೆ ಮುಂದಿನ ಐದು ದಿನಗಳ ಕಾಲ ಧಾರಾಕಾರ ಮಳೆ ಸುರಿಯಲಿದೆ ಎಂದು ತಿರುವನಂತಪುರದ ಕೇಂದ್ರ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಈ ನಿಮಿತ್ತ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಜುಲೈ 12 ರಂದು (ಇಂದು) ಇಡುಕ್ಕಿ , ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಕೇಂದ್ರ ಹವಾಮಾನ ಇಲಾಖೆಯು ಆರೆಂಜ್ ಅಲರ್ಟ್ ಘೋಷಿಸಿದೆ. ಮುಂದಿನ ಐದು ದಿನಗಳಲ್ಲಿ ಭಾರೀ ಮಳೆ ಮತ್ತು ಗಾಳಿಯ ಮುನ್ಸೂಚನೆ ನೀಡಲಾಗಿದೆ. ಕೇರಳದ ಹಲವು ಪ್ರದೇಶಗಳಲ್ಲಿ 24 ಗಂಟೆಗಳಲ್ಲಿ 115.6 ಮಿ.ಮೀ. ನಿಂದ 204.4 ಮಿ.ಮೀ. ವರೆಗೆ ಹೆಚ್ಚಿನ ಪ್ರಮಾಣದ ಮಳೆಯಾಗುವ ನಿರೀಕ್ಷೆಯಿದೆ. ಜುಲೈ 14 ರಂದು ಇಡುಕ್ಕಿ , ಮಲಪ್ಪುರಂ, ಕಲ್ಲಿಕೋಟೆ, ಕಣ್ಣೂರು, ಕಾಸರಗೋಡು ಹಾಗೂ ಜುಲೈ 15 ರಂದು ಎರ್ನಾಕುಳಂ, ಇಡುಕ್ಕಿ , ತೃಶೂರು, ಮಲಪ್ಪುರಂ, ಕಲ್ಲಿಕೋಟೆ, ವಯನಾಡು, ಕಣ್ಣೂರು, ಕಾಸರಗೋಡು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಜಾರಿಗೊಳಿಸಲಾಗಿದೆ. ಈ ಜಿಲ್ಲೆಗಳಲ್ಲಿ 24 ಗಂಟೆಗಳಲ್ಲಿ 64.5 ಮಿ.ಮೀ. ನಿಂದ 115.5 ಮಿ.ಮೀ. ತನಕ ಮಳೆಯಾಗುವ ಸಾಧ್ಯತೆಗಳಿವೆ.
ರಾಜ್ಯದಲ್ಲಿ ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ತಗ್ಗು ಪ್ರದೇಶಗಳು, ನದಿ ತೀರಗಳು, ಸಮುದ್ರ ಕರಾವಳಿ, ಮಲೆನಾಡು ಪ್ರದೇಶಗಳು ಹಾಗೂ ಭೂಕುಸಿತ ಉಂಟಾಗುವ ವ್ಯಾಪ್ತಿಯಲ್ಲಿ ಗರಿಷ್ಠ ಎಚ್ಚರಿಕೆ ವಹಿಸಬೇಕು ಎಂದು ಕೇಂದ್ರ ಹವಾಮಾನ ಇಲಾಖೆಯು ಸೂಚನೆ ನೀಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss